Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:22 - ಪರಿಶುದ್ದ ಬೈಬಲ್‌

22 ಜನಾಂಗಗಳು ಒಟ್ಟುಗೂಡಿ ಬರುವವು. ರಾಜ್ಯಗಳು ಯೆಹೋವನ ಸೇವೆಮಾಡಲು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಜನಾಂಗಗಳೂ ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ ಎಂದು ಹೇಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:22
11 ತಿಳಿವುಗಳ ಹೋಲಿಕೆ  

ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ.


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. ಒಟ್ಟಾಗಿ ಸಂತಸಪಡುತ್ತಿದ್ದಾರೆ. ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.


ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು