Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:5 - ಪರಿಶುದ್ದ ಬೈಬಲ್‌

5 ದೀರ್ಘ ದುಃಖದಿಂದಾಗಿ ನನ್ನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಟ್ಟುಸಿರಿನಿಂದ ನನ್ನಲ್ಲಿ ಎಲುಬು, ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಟ್ಟುಸುರಿನಿಂದ ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ. ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:5
10 ತಿಳಿವುಗಳ ಹೋಲಿಕೆ  

“ನನ್ನ ಶಕ್ತಿಯೆಲ್ಲಾ ಕಳೆದುಹೋಗಿದೆ; ನಾನು ಅಸ್ಥಿಪಂಜರದಂತೆ ಆಗಿರುವೆ. ನನ್ನಲ್ಲಿ ಸ್ವಲ್ಪ ಜೀವ ಮಾತ್ರ ಉಳಿದುಕೊಂಡಿದೆ.


ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.


ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.


ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.


ಪ್ರತಿ ವರ್ಷವೂ ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವರ ಕುಟುಂಬವು ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕಿ ನೋವು ಮಾಡುತ್ತಿದ್ದಳು. ಒಂದು ದಿನ ಎಲ್ಕಾನನು ಯಜ್ಞವನ್ನು ಅರ್ಪಿಸುವಾಗ, ಹನ್ನಳು ನೊಂದುಕೊಂಡು ಅಳಲಾರಂಭಿಸಿದಳು. ಹನ್ನಳು ಊಟಮಾಡಲೇ ಇಲ್ಲ.


ಮನುಷ್ಯನ ಜೀವಿತವು ಹೂವಿನಂತೆ ಬೇಗನೆ ಬೆಳೆದು ಒಣಗಿಹೋಗುವುದು. ಮನುಷ್ಯನ ಜೀವಿತವು ನೆರಳಿನಂತೆ ಕ್ಷಣಿಕವಾದದ್ದು.


ಹೊತ್ತಾರೆಯಲ್ಲಿ ಹುಲ್ಲು ಚಿಗುರತೊಡಗಿದರೂ ಸಾಯಂಕಾಲದೊಳಗೆ ಒಣಗಿಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು