Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:9 - ಪರಿಶುದ್ದ ಬೈಬಲ್‌

9 ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ವಿುಶ್ರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:9
10 ತಿಳಿವುಗಳ ಹೋಲಿಕೆ  

“ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.


ನಿನ್ನ ಜನರಿಗೆ ಕಣ್ಣೀರನ್ನು ಆಹಾರವನ್ನಾಗಿ ಮಾಡಿರುವೆ. ನಿನ್ನ ಜನರಿಗೆ ಕಣ್ಣೀರು ತುಂಬಿರುವ ಪಾತ್ರೆಗಳನ್ನು ಕೊಟ್ಟಿರುವೆ. ಕಣ್ಣೀರೇ ಅವರಿಗೆ ಕುಡಿಯುವ ನೀರಾಗಿದೆ.


ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.


ಇದನ್ನು ಗತ್‌ನಲ್ಲಿ ತಿಳಿಸಬೇಡಿ. ಅಕ್ಕೊದಲ್ಲಿ ಅಳಬೇಡಿರಿ. ಬೆತ್ ಒಫ್ರದ ಧೂಳಿನಲ್ಲಿ ಹೊರಳಾಡಿರಿ.


ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ.


ಅವರು ನನಗೆ ಕೊಟ್ಟದ್ದು ವಿಷ, ಆಹಾರವಲ್ಲ. ಅವರು ನನಗೆ ಕೊಟ್ಟದ್ದು ಹುಳಿರಸ, ದ್ರಾಕ್ಷಾರಸವಲ್ಲ.


ಊಟದ ಸಮಯದಲ್ಲಿ ನಿಟ್ಟುಸಿರೇ ನನ್ನ ಆಹಾರವಾಗಿದೆ. ನನ್ನ ನರಾಳಾಟವು ಜಲಧಾರೆಯಂತಿದೆ.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು