Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:11 - ಪರಿಶುದ್ದ ಬೈಬಲ್‌

11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವಾಗಿದೆಯೋ ಆತನ ಮಹಾಪ್ರೀತಿಯು ಆತನ ಭಕ್ತರ ಮೇಲೆ ಅಷ್ಟೇ ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:11
12 ತಿಳಿವುಗಳ ಹೋಲಿಕೆ  

ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.


ಆಕಾಶದ ಎತ್ತರವನ್ನಾಗಲಿ ಭೂಮಿಯ ಆಳವನ್ನಾಗಲಿ ಅಳೆಯಲು ಯಾರಿಗೆ ಸಾಧ್ಯ? ಅಂತೆಯೇ ರಾಜರುಗಳ ಮನಸ್ಸನ್ನು ಯಾರೂ ಅರ್ಥಮಾಡಿಕೊಳ್ಳಲಾರರು.


ಆಕಾಶವು ಭೂಮಿಗಿಂತ ಎಷ್ಟು ಎತ್ತರವಾಗಿದೆಯೋ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ ಅಷ್ಟೇ ಉನ್ನತವಾಗಿವೆ; ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತ ಅಷ್ಟೇ ಉನ್ನತವಾಗಿವೆ.” ಇದು ಯೆಹೋವನ ನುಡಿ.


ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.


“ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿ ನೋಡುವನು. ನಕ್ಷತ್ರಗಳು ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು