“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.
ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.
ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.
ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.
ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.
“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;
ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.