Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:10 - ಪರಿಶುದ್ದ ಬೈಬಲ್‌

10 ನೀನು ನೀರನ್ನು ಬುಗ್ಗೆಗಳಿಂದ ತೊರೆಗಳಿಗೆ ಹರಿಯಮಾಡುವೆ. ಬೆಟ್ಟದ ತೊರೆಗಳ ಮೂಲಕ ನೀರು ಹರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದುಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬುಗ್ಗೆಗಳನ್ನು ತಗ್ಗುಗಳಿಗೆ ಬರಮಾಡುತ್ತೀ; ಅವು ಪರ್ವತಗಳ ನಡುವೆ ಹರಿದು ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ. ಅವು ಬೆಟ್ಟಗಳ ನಡುವೆ ಹರಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:10
4 ತಿಳಿವುಗಳ ಹೋಲಿಕೆ  

ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.


ಆತನು ಮರಳುಗಾಡನ್ನು ಸರೋವರಗಳುಳ್ಳ ನಾಡನ್ನಾಗಿ ಪರಿವರ್ತಿಸಿದನು; ಒಣನೆಲದಿಂದ ನೀರಿನ ಒರತೆಗಳನ್ನು ಹರಿಯಮಾಡಿದನು.


ಆಗ ಜನರು ಬಿಸುಲ್ಗುದುರೆಯನ್ನು ನೋಡಿ ನೀರು ಎಂದು ಭಾವಿಸುವರು. ಆದರೆ ಆಗ ನೀರಿನ ಕೊಳಗಳೇ ಇರುವವು. ಬೆಂಗಾಡಿನಲ್ಲಿ ಬಾವಿಗಳಿರುವವು. ನೆಲದೊಳಗಿಂದ ನೀರು ಉಕ್ಕುವುದು. ಒಂದು ಕಾಲದಲ್ಲಿ ಕಾಡುಪ್ರಾಣಿಗಳು ವಾಸವಾಗಿದ್ದ ಸ್ಥಳದಲ್ಲಿ ಎತ್ತರವಾದ ನೀರವಂಜಿಗಳು ಬೆಳೆಯುವವು.


ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಆ ದೇಶದಲ್ಲಿ ನೀರು ಸಮೃದ್ಧಿಯಾಗಿರುವುದು. ನೀರು ಕಣಿವೆಗಳಲ್ಲಿಯೂ ಬೆಟ್ಟಗಳಲ್ಲಿಯೂ ನೆಲದ ಮೇಲೂ ಹರಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು