ಕೀರ್ತನೆಗಳು 104:15 - ಪರಿಶುದ್ದ ಬೈಬಲ್15 ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೃದಯಾನಂದಕರವಾದ ದ್ರಾಕ್ಷಾರಸವನ್ನೂ ಮುಖಕ್ಕೆ ಕಾಂತಿಯನ್ನುಂಟುಮಾಡುವ ಎಣ್ಣೆಯನ್ನೂ ಪ್ರಾಣಾಧಾರವಾದ ರೊಟ್ಟಿಯನ್ನೂ ಸಂಪಾದಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು; ಸಂತೋಷದಿಂದ ನಲಿದಾಡುವರು. ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು. ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು. ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು. ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.