Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:19 - ಪರಿಶುದ್ದ ಬೈಬಲ್‌

19 ವಿಶೇಷಕಾಲಗಳ ಸೂಚನೆಗಾಗಿ ನೀನು ನಮಗೆ ಚಂದ್ರನನ್ನು ಕೊಟ್ಟಿರುವೆ. ಸೂರ್ಯನಿಗೆ ತಾನು ಮುಳುಗತಕ್ಕ ಸಮಯವು ಯಾವಾಗಲೂ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿದ್ದೀ; ಸೂರ್ಯನು ತನ್ನ ಅಸ್ತಮಾನಸಮಯವನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:19
9 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನ್ನು ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಬ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”


ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ ನೀನು ಸೃಷ್ಟಿಸಿದ ಚಂದ್ರನಕ್ಷತ್ರಗಳನ್ನೂ ನೋಡಿ ಆಶ್ಚರ್ಯಗೊಳ್ಳುವೆನು.


“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ ಮುಂಜಾನೆಗಾಗಲಿ ಹಗಲಿಗಾಗಲಿ ಆರಂಭವಾಗೆಂದು ಆಜ್ಞಾಪಿಸಿರುವಿಯಾ?


ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.


ನೀನು ಹಗಲನ್ನೂ ರಾತ್ರಿಯನ್ನೂ ನಿನ್ನ ಹತೋಟಿಯಲ್ಲಿಟ್ಟುಕೊಂಡಿರುವೆ. ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಮಾಡಿದಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು