Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:29 - ಪರಿಶುದ್ದ ಬೈಬಲ್‌

29 ನೀನು ಅವುಗಳಿಗೆ ವಿಮುಖನಾದಾಗ ಅವು ಭಯಗೊಳ್ಳುತ್ತವೆ. ಅವುಗಳ ಶ್ವಾಸವು ಹೋಗಿ ಬಲಹೀನತೆಯಿಂದ ಸತ್ತು ಮತ್ತೆ ಮಣ್ಣಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಕೊಳ್ಳಲು ಅವು ಸತ್ತು ತಿರಿಗಿ ಮಣ್ಣಿಗೆ ಸೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:29
12 ತಿಳಿವುಗಳ ಹೋಲಿಕೆ  

ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.


ಮನುಷ್ಯರು ಸತ್ತು ಸಮಾಧಿಗೆ ಸೇರುವರು; ಆಗ ನಿಮಗೆ ಸಹಾಯಮಾಡಬೇಕೆಂಬ ಅವರ ಆಲೋಚನೆಗಳೆಲ್ಲಾ ಅಳಿದುಹೋಗುತ್ತವೆ.


ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ಆ ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.


ಜನರಿಗೆ ಜನ್ಮನೀಡುವಾತನೂ ನೀನೇ; ಅವರನ್ನು ಮತ್ತೆ ಧೂಳನ್ನಾಗಿ ಮಾಡುವಾತನೂ ನೀನೇ.


ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ದೇವರೇ, ನೀನು ನನ್ನನ್ನು ಜೇಡಿಮಣ್ಣಿನಂತೆ ಮಾಡಿರುವೆ ಎಂಬುದನ್ನು ಜ್ಞಾಪಿಸಿಕೋ. ಈಗ ನನ್ನನ್ನು ಮತ್ತೆ ಧೂಳನ್ನಾಗಿ ಯಾಕೆ ಮಾರ್ಪಡಿಸುತ್ತಿರುವೆ?


ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.


ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.


ದೇವರೇ, ನೀನೇಕೆ ನನಗೆ ಮರೆಯಾಗಿರುವೆ? ನನ್ನನ್ನೇಕೆ ನಿನ್ನ ಶತ್ರುವೆಂದು ಪರಿಗಣಿಸಿರುವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು