Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 104:4 - ಪರಿಶುದ್ದ ಬೈಬಲ್‌

4 ಗಾಳಿಯನ್ನು ನಿನ್ನ ದೂತರನ್ನಾಗಿಯೂ ಬೆಂಕಿಯನ್ನು ನಿನ್ನ ಸೇವಕರನ್ನಾಗಿಯೂ ಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಾಳಿಗಳನ್ನು ನಿನ್ನ ದೂತರನ್ನಾಗಿಯೂ ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 104:4
8 ತಿಳಿವುಗಳ ಹೋಲಿಕೆ  

ದೇವರು ತನ್ನ ದೂತರನ್ನು ಕುರಿತು ಹೇಳಿದ್ದು ಹೀಗಿದೆ: “ದೇವರು ತನ್ನ ದೂತರನ್ನು ಗಾಳಿಗಳನ್ನಾಗಿ ಮಾಡಿದನು. ಆತನು ತನ್ನ ಸೇವಕರನ್ನು ಬೆಂಕಿಯ ಜ್ವಾಲೆಗಳಂತೆ ಮಾಡಿದನು.”


ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು.


ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು!


ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.


ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.


ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.


(ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)


ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು