ಕೀರ್ತನೆಗಳು 105:16 - ಪರಿಶುದ್ದ ಬೈಬಲ್16 ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು. ಅಧ್ಯಾಯವನ್ನು ನೋಡಿ |
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.