ಕೀರ್ತನೆಗಳು 105:40 - ಪರಿಶುದ್ದ ಬೈಬಲ್40 ಜನರು ಮಾಂಸಕ್ಕಾಗಿ ಕೇಳಿಕೊಂಡಾಗ ಆತನು ಅವರಿಗೆ ಲಾವಕ್ಕಿಗಳನ್ನು ಬರಮಾಡಿದನು; ಪರಲೋಕದಿಂದ ಮನ್ನವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.