Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:41 - ಪರಿಶುದ್ದ ಬೈಬಲ್‌

41 ಆತನು ಬಂಡೆಯನ್ನು ಸೀಳಿದಾಗ ನೀರು ಚಿಮ್ಮುತ್ತಾ ಹೊರಬಂದಿತು; ಅರಣ್ಯದಲ್ಲಿ ನದಿಯು ಹರಿಯತೊಡಗಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನು ಬಂಡೆಯನ್ನು ಸೀಳಲು ನೀರು ಚಿವ್ಮಿು ಬಂದು ಅರಣ್ಯದಲ್ಲಿ ನದಿಯಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:41
8 ತಿಳಿವುಗಳ ಹೋಲಿಕೆ  

ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.


ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.


ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.


ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.


ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ.


ಆತನು ಬಂಡೆಯನ್ನು ಹೊಡೆದಾಗ ನೀರು ಪ್ರವಾಹದಂತೆ ಹೊರಬಂದದ್ದೇನೊ ನಿಜ! ಆದರೆ ಆತನು ನಮಗೆ ರೊಟ್ಟಿಯನ್ನೂ ಮಾಂಸವನ್ನೂ ಕೊಡಬಲ್ಲನೇ!” ಎಂದು ಹೇಳಿದರು.


ಅವರು ಹಸಿದಿದ್ದಾಗ ಪರಲೋಕದಿಂದ ಊಟವನ್ನು ಅವರಿಗೆ ದಯಪಾಲಿಸಿದೆ. ಅವರು ಬಾಯಾರಿದಾಗ ಬಂಡೆಯಿಂದ ಅವರಿಗೆ ನೀರನ್ನು ಕೊಟ್ಟೆ. ನೀನು ಅವರಿಗೆ, ‘ಬನ್ನಿ, ಈ ದೇಶವನ್ನು ತೆಗೆದುಕೊಳ್ಳಿರಿ’ ಎಂದು ಹೇಳಿದೆ. ನಿನ್ನ ಪರಾಕ್ರಮವನ್ನು ತೋರಿಸಿದೆ. ಅವರಿಗಾಗಿ ಭೂಮಿಯನ್ನು ತೆಗೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು