ಕೀರ್ತನೆಗಳು 105:44 - ಪರಿಶುದ್ದ ಬೈಬಲ್44 ಅನ್ಯಜನರು ವಾಸವಾಗಿದ್ದ ದೇಶವನ್ನು ದೇವರು ತನ್ನ ಜನರಿಗೆ ಕೊಟ್ಟನು. ಅನ್ಯಜನರು ದುಡಿದು ಸಂಪಾದಿಸಿದ್ದವುಗಳನ್ನು ದೇವಜನರು ಪಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು. ಅಧ್ಯಾಯವನ್ನು ನೋಡಿ |
“‘ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.’”