Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:45 - ಪರಿಶುದ್ದ ಬೈಬಲ್‌

45 ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರು ತನ್ನ ವಿಧಿಗಳನ್ನು ಕೈಕೊಂಡು, ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರು ತನ್ನ ವಿಧಿಗಳನ್ನು ಕೈಕೊಂಡು ತನ್ನ ಧರ್ಮಶಾಸ್ತ್ರವನ್ನು ಅನುಸರಿಸಬೇಕೆಂಬದೇ ಆತನ ಉದ್ದೇಶ. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:45
12 ತಿಳಿವುಗಳ ಹೋಲಿಕೆ  

ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


“ಇಸ್ರೇಲರೇ, ಈಗ ನಾನು ಉಪದೇಶಿಸಲಿರುವ ಕಟ್ಟಳೆಗಳಿಗೂ ಆಜ್ಞೆಗಳಿಗೂ ಕಿವಿಗೊಡಿರಿ. ನೀವು ಅವುಗಳಿಗೆ ವಿಧೇಯರಾದರೆ ಜೀವಿಸುವಿರಿ. ಆಗ ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿರಿ.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು! ಆತನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನ ಪ್ರೀತಿಯು ಶಾಶ್ವತವಾದದ್ದು!


ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ!


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಆಗ ಅವರೆಲ್ಲರೂ ದೇವರಲ್ಲಿ ಭರವಸೆ ಇಡುವರು. ದೇವರ ಮಹತ್ಕಾರ್ಯಗಳನ್ನು ಅವರು ಮರೆಯುವುದೇ ಇಲ್ಲ. ಅವರು ಜಾಗ್ರತೆಯಿಂದ ದೇವರ ಆಜ್ಞೆಗಳಿಗೆ ವಿಧೇಯರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು