Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:7 - ಪರಿಶುದ್ದ ಬೈಬಲ್‌

7 ಯೆಹೋವನೇ ನಮ್ಮ ದೇವರು. ಆತನು ಇಡೀ ಪ್ರಪಂಚವನ್ನು ಆಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭು ನಮ್ಮ ದೇವನೆಂಬುದು ಶ್ರುತ I ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:7
10 ತಿಳಿವುಗಳ ಹೋಲಿಕೆ  

ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.


ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.


“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು