“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.
ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.
ನಂತರ ನಾನು ಈ ಪ್ರಾರ್ಥನೆ ಮಾಡಿದೆನು: “ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.
ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ.
“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;
“ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.