Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:10 - ಪರಿಶುದ್ದ ಬೈಬಲ್‌

10 ನಮ್ಮ ಪೂರ್ವಿಕರನ್ನು ಅವರ ಶತ್ರುಗಳಿಂದ ರಕ್ಷಿಸಿದನು! ವೈರಿಗಳಿಂದ ಪಾರುಮಾಡಿದನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಯ ಹಸ್ತದಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಹಸ್ತದಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:10
10 ತಿಳಿವುಗಳ ಹೋಲಿಕೆ  

ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.


ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.


ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.


ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.


ಯೆಹೋವನು ಈಜಿಪ್ಟಿನ ಸೈನಿಕರಿಗೂ ಅವರ ಕುದುರೆ ರಥಗಳಿಗೂ ಮಾಡಿದ್ದನ್ನು ನೋಡಿದವರು ನೀವೇ ಹೊರತು ನಿಮ್ಮ ಮಕ್ಕಳಲ್ಲ. ಅವರು ನಿಮ್ಮನ್ನು ಓಡಿಸಿಕೊಂಡು ಬರುತ್ತಿದ್ದರು. ಆದರೆ ಯೆಹೋವನು ಅವರನ್ನು ಸಮುದ್ರದ ನೀರಿನಲ್ಲಿ ಮುಳುಗಿಹೋಗುವಂತೆ ಮಾಡಿದುದ್ದನ್ನು ನೋಡಿದ್ದೀರಿ ಮತ್ತು ಅವರು ಸಂಪೂರ್ಣವಾಗಿ ನಾಶವಾಗುವುದನ್ನು ನೋಡಿದ್ದೀರಿ.


ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು ಪ್ರೀತಿಯಿಂದ ನಡೆಸುವೆ. ನಿನ್ನ ಬಲದಿಂದ ನೀನು ಈ ಜನರನ್ನು ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.


ದಿನವೆಲ್ಲಾ ದೇವರನ್ನು ಕೊಂಡಾಡಿದೆವು. ನಿನ್ನ ಹೆಸರನ್ನು ಸದಾಕಾಲ ಸ್ತುತಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು