Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:13 - ಪರಿಶುದ್ದ ಬೈಬಲ್‌

13 ಆದರೆ ಆತನ ಕಾರ್ಯಗಳನ್ನು ಅವರು ಬೇಗನೆ ಮರೆತುಬಿಟ್ಟರು; ಆತನ ಉಪದೇಶಗಳಿಗೆ ಕಿವಿಗೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು, ಆತನ ನಡೆಸುವಿಕೆಗೆ ಕಾದಿರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:13
11 ತಿಳಿವುಗಳ ಹೋಲಿಕೆ  

ದೇವರ ಮಹತ್ಕಾರ್ಯಗಳನ್ನೂ ಆತನು ಅವರಿಗೆ ತೋರಿಸಿದ ಸೂಚಕಕಾರ್ಯಗಳನ್ನೂ ಎಫ್ರಾಯಿಮಿನ ಜನರು ಮರೆತುಬಿಟ್ಟರು.


ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.


ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ಯಾಕೆಂದರೆ ಅವರು ಯೆಹೋವನ ಆಜ್ಞೆಗಳಿಗೆ ವಿರೋಧವಾಗಿ ದಂಗೆ ಎದ್ದರು. ಮಹೋನ್ನತನಾದ ದೇವರ ಉಪದೇಶವನ್ನು ತಿರಸ್ಕರಿಸಿದರು.


ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.


ನೀವು ನನ್ನ ಗದರಿಕೆಯ ಮಾತುಗಳನ್ನು ತಿರಸ್ಕರಿಸಿದಿರಿ. ನಾನು ನಿಮಗೆ ಸರಿಯಾದ ದಾರಿಯನ್ನು ತೋರಿಸಿದಾಗ ನೀವು ನನಗೆ ಕಿವಿಗೊಡಲಿಲ್ಲ.


ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.


ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.


ಯೆಹೋವನು ನಿನ್ನನ್ನು ಸೃಷ್ಟಿಸಿದ್ದಾನೆ. ತನ್ನ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿದವನು ಆತನೇ. ಆತನು ತನ್ನ ಶಕ್ತಿಯಿಂದ ಭೂಮಿಯ ಮೇಲೆ ಆಕಾಶವನ್ನು ಹರಡಿದ್ದಾನೆ. ಆದರೆ ನೀನು ಆತನನ್ನೂ ಆತನ ಶಕ್ತಿಯನ್ನೂ ಮರೆತುಬಿಟ್ಟೆ ಆದ್ದರಿಂದಲೇ ನಿನಗೆ ಕೇಡುಮಾಡುವ ದುಷ್ಟರಿಗೆ ನೀನು ಯಾವಾಗಲೂ ಹೆದರಿಕೊಂಡಿರುವೆ. ಅವರು ನಿನ್ನನ್ನು ನಾಶಮಾಡಲು ಆಲೋಚಿಸಿದ್ದಾರೆ. ಈಗ ಅವರೆಲ್ಲಿದ್ದಾರೆ? ಅವರೆಲ್ಲಾ ಹೋಗಿಬಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು