Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:19 - ಪರಿಶುದ್ದ ಬೈಬಲ್‌

19 ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ, ಅದಕ್ಕೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೋರೇಬಿನಲ್ಲಿ ಎರಕದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:19
10 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ.


ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು!


ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು.


ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು.


ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು