Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:38 - ಪರಿಶುದ್ದ ಬೈಬಲ್‌

38 ದೇವಜನರು ನಿರಪರಾಧಿಗಳಾದ ತಮ್ಮ ಮಕ್ಕಳ ರಕ್ತವನ್ನು ಆ ಸುಳ್ಳುದೇವರುಗಳಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ ತಮ್ಮ ಮಕ್ಕಳ ನಿರಪರಾಧರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:38
15 ತಿಳಿವುಗಳ ಹೋಲಿಕೆ  

“ನೀವು ವಾಸವಾಗಿರುವ ದೇಶವನ್ನು ಕೆಡಿಸಬಾರದು. ಕೊಲೆಯು ದೇಶವನ್ನು ಕೆಡಿಸುತ್ತದೆ. ಕೊಲೆಯು ನಡೆಯಲ್ಪಟ್ಟಿರುವ ದೇಶಕ್ಕೆ ಕೊಲೆಗಾರನ ರಕ್ತವೇ ಹೊರತು ಬೇರೆ ಯಾವ ಈಡೂ ಇಲ್ಲ.


ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ.


ಮನಸ್ಸೆಯು ಅನೇಕ ನಿರಪರಾಧಿಗಳನ್ನು ಕೊಂದುಹಾಕಿದನು; ಜೆರುಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೆ ರಕ್ತದಿಂದ ತುಂಬಿಸಿದನು. ಯೆಹೂದವನ್ನು ಪಾಪಕ್ಕೆ ಪ್ರೇರೇಪಿಸಿದ್ದರ ಜೊತೆಗೆ ಅವನ ಈ ಪಾಪಗಳು ಕೂಡಿಕೊಂಡವು. ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೆಹೂದವು ಮಾಡುವಂತೆ ಮನಸ್ಸೆಯು ಪ್ರೇರೇಪಿಸಿದನು.’”


ಹೀಗೆ ನೀವು ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ನಿಮ್ಮ ಸಮೂಹದಿಂದ ದೋಷವನ್ನು ತೆಗೆದುಹಾಕುವಿರಿ.


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


“ಸೆರೆಯವರಿಗಾಗಿ ಸರಪಣಿಗಳನ್ನು ಮಾಡು. ದೇಶವು ಕೊಲೆಯ ಅಪರಾಧಗಳಿಂದ ತುಂಬಿದೆ. ಪಟ್ಟಣದಲ್ಲಿ ಹಿಂಸೆಯು ತುಂಬಿದೆ.


ನಿನ್ನ ಕೈಗಳ ಮೇಲೆ ರಕ್ತದ ಕಲೆ ಇದೆ. ಅದು ನಿರ್ದೋಷಿಗಳಾದ ಬಡವರ ರಕ್ತ. ಅವರು ನಿನ್ನ ಕೈಗೆ ಸಿಕ್ಕಿಹಾಕಿಕೊಂಡ ಕಳ್ಳರಾಗಿರಲಿಲ್ಲ. ಆದರೂ ನೀನು ಅವರನ್ನು ಕೊಲೆ ಮಾಡಿರುವೆ. ನೀನು ಅಂಥ ಕೆಟ್ಟ ಕೆಲಸವನ್ನು ಮಾಡಿರುವೆ.


ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.


“ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.


ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ.


“ನೀವು ನಿಮ್ಮ ಯಾವ ಮಕ್ಕಳನ್ನೂ ಅಗ್ನಿಯ ಮೂಲಕ ಮೊಲೆಕನಿಗೆ ಕೊಡಬಾರದು. ಇಲ್ಲವಾದರೆ ನೀವು ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡುವಿರಿ. ನಾನೇ ಯೆಹೋವನು!


ಆದ್ದರಿಂದ ದೇಶವು ಸಹ ಅಶುದ್ಧವಾಯಿತು. ಆದ್ದರಿಂದ ನಾನು ಅದನ್ನು ಅದರ ಪಾಪಗಳಿಗಾಗಿ ದಂಡಿಸಿದೆನು. ಆ ದೇಶವು ತನ್ನಲ್ಲಿ ವಾಸಿಸಿದ ಜನರನ್ನು ಕಾರಿಬಿಟ್ಟಿತು.


ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.


ಯೆಹೂದದ ಜನರು ನನ್ನ ಅನುಸರಣೆಯನ್ನು ಬಿಟ್ಟಿದ್ದರಿಂದ ನಾನು ಹೀಗೆ ಮಾಡುವೆನು. ಇದನ್ನು ಅವರು ಅನ್ಯದೇವರುಗಳ ಸ್ಥಳವನ್ನಾಗಿ ಮಾಡಿದ್ದಾರೆ. ಯೆಹೂದದ ಜನರು ಈ ಸ್ಥಳದಲ್ಲಿ ಅನ್ಯದೇವರುಗಳಿಗಾಗಿ ಧೂಪವನ್ನು ಹಾಕಿದ್ದಾರೆ. ಬಹಳ ಹಿಂದೆ ಈ ಜನರು ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಅವರ ಹಿರಿಯರೂ ಆ ದೇವರುಗಳನ್ನು ಪೂಜಿಸುತ್ತಿರಲಿಲ್ಲ. ಇವುಗಳು ಅನ್ಯದೇಶದ ಹೊಸ ದೇವರುಗಳು. ಯೆಹೂದದ ರಾಜರು ಈ ಸ್ಥಳವನ್ನು ಮುಗ್ಧಮಕ್ಕಳ ರಕ್ತದಿಂದ ತುಂಬಿದರು.


ದೇವರು ಹೇಳಿದ್ದೇನೆಂದರೆ, “ನನ್ನ ಮಕ್ಕಳಾಗಿದ್ದ ನಿನ್ನ ಪುತ್ರಪುತ್ರಿಯರನ್ನು ನೀನು ತೆಗೆದುಕೊಂಡು ಅವರನ್ನು ಆಹಾರವನ್ನಾಗಿ ವಿಗ್ರಹಗಳಿಗೆ ಯಜ್ಞ ಅರ್ಪಿಸಿದೆ. ನಿನ್ನ ಸೂಳೆತನವು ಸಾಕಾಗಿರಲಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು