Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:39 - ಪರಿಶುದ್ದ ಬೈಬಲ್‌

39 ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:39
17 ತಿಳಿವುಗಳ ಹೋಲಿಕೆ  

ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.


ಈ ಗೊಂಡೆಗಳನ್ನು ನೀವು ನೋಡುವಾಗ, ಯೆಹೋವನು ನಿಮಗೆ ಕೊಟ್ಟ ಅಪ್ಪಣೆಗಳನ್ನೆಲ್ಲ ಜ್ಞಾಪಕಮಾಡಿಕೊಳ್ಳಬೇಕು ಮತ್ತು ಅವುಗಳಿಗೆ ವಿಧೇಯರಾಗಬೇಕು. ನೀವು ನಿಮ್ಮ ಮನಸ್ಸಿಗೆ ಮತ್ತು ಕಣ್ಣಿಗೆ ತೋರಿದ ಪ್ರಕಾರ ನಡೆಯದೆ ನಂಬಿಗಸ್ತರಾಗಿರಬೇಕು.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದುಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.


ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ.


ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.


ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.


ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.


“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸ್ವದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು