Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:42 - ಪರಿಶುದ್ದ ಬೈಬಲ್‌

42 ಶತ್ರುಗಳು ಅವರನ್ನು ತಮ್ಮ ಅಧೀನದಲ್ಲಿಟ್ಟುಕೊಂಡು ಅವರ ಜೀವಿತವನ್ನು ಸಂಕಷ್ಟಕ್ಕೆ ಗುರಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಗುರಿಯಾದರು ಶತ್ರುಶೋಷಣೆಗೆ I ಕುಗ್ಗಿಹೋದವರು ಅವರ ಕೈಕೆಳಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:42
6 ತಿಳಿವುಗಳ ಹೋಲಿಕೆ  

ಚೀದೋನ್ಯರು, ಅಮಾಲೇಕ್ಯರು, ಮಿದ್ಯಾನ್ಯರು ನಿಮ್ಮನ್ನು ಪೀಡಿಸಿದಾಗ ನನಗೆ ಮೊರೆಯಿಟ್ಟಿರಿ. ಅವರಿಂದಲೂ ನಾನು ನಿಮ್ಮನ್ನು ರಕ್ಷಿಸಿದೆ.


ಸೀಸೆರನ ಹತ್ತಿರ ಒಂಭೈನೂರು ಕಬ್ಬಿಣದ ರಥಗಳಿದ್ದವು. ಅವನು ಇಪ್ಪತ್ತು ವರ್ಷಗಳ ಕಾಲ ಇಸ್ರೇಲರನ್ನು ತುಂಬ ಬಾಧಿಸಿದನು. ಆದ್ದರಿಂದ ಇಸ್ರೇಲರು ಸಹಾಯಕ್ಕಾಗಿ ಯೆಹೋವನಲ್ಲಿ ಮೊರೆಯಿಟ್ಟರು.


ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡನು. ಶತ್ರುಗಳು ಇಸ್ರೇಲರ ಮೇಲೆ ಧಾಳಿಮಾಡಿ ಅವರ ಸ್ವತ್ತನ್ನು ತೆಗೆದುಕೊಳ್ಳುವಂತೆ ಯೆಹೋವನು ಮಾಡಿದನು. ಸುತ್ತಮುತ್ತಲಿದ್ದ ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಇಸ್ರೇಲರು ಶತ್ರುಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಆಗಲಿಲ್ಲ.


ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”


ನಮ್ಮ ಪೂರ್ವಿಕರಿಗೆ ವಿಶ್ರಾಂತಿ ಸಿಕ್ಕಿದ ಕೂಡಲೇ ಅವರು ಮತ್ತೆ ದುಷ್ಕೃತ್ಯಗಳನ್ನು ಮಾಡಲಾರಂಭಿಸಿದರು. ಆದ್ದರಿಂದ ಆ ವೈರಿಗಳು ಅವರನ್ನು ಸೋಲಿಸಿ ಶಿಕ್ಷಿಸುವಂತೆ ನೀನು ಮಾಡಿದೆ. ಅವರು ನಿನ್ನ ಸಹಾಯಕ್ಕಾಗಿ ಮೊರೆಯಿಟ್ಟರು. ಪರಲೋಕದಲ್ಲಿ ನೀನು ಅವರ ಮೊರೆಯನ್ನು ಕೇಳಿ ಅವರಿಗೆ ಸಹಾಯಮಾಡಿದೆ. ನೀನು ದಯಾಳು! ಈ ರೀತಿ ಅನೇಕಸಲ ಆಯಿತು.


“ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು