ಕೀರ್ತನೆಗಳು 106:44 - ಪರಿಶುದ್ದ ಬೈಬಲ್44 ಆದರೆ ಅವರು ಆಪತ್ತಿನಲ್ಲಿದ್ದಾಗಲೆಲ್ಲಾ ದೇವರಿಗೆ ಮೊರೆಯಿಟ್ಟರು; ಆತನು ಅವರ ಪ್ರಾರ್ಥನೆಗಳಿಗೆ ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆದರೆ ಆತನು ಕಷ್ಟದಲ್ಲಿದ್ದ ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು, ಅಧ್ಯಾಯವನ್ನು ನೋಡಿ |
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.