Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:48 - ಪರಿಶುದ್ದ ಬೈಬಲ್‌

48 ಇಸ್ರೇಲಿನ ದೇವರಾದ ಯೆಹೋವನನ್ನು ಕೊಂಡಾಡಿರಿ. ಆತನು ಯಾವಾಗಲೂ ಇದ್ದವನೂ ಎಂದೆಂದಿಗೂ ಇರುವಾತನೂ ಆಗಿದ್ದಾನೆ. “ಆಮೆನ್! ಯೆಹೋವನಿಗೆ ಸ್ತೋತ್ರವಾಗಲಿ!” ಎಂದು ಜನರೆಲ್ಲರೂ ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಇಸ್ರಾಯೇಲ್ ದೇವರಾದ ಯೆಹೋವನಿಗೆ, ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ “ಆಮೆನ್” ಎನ್ನಲಿ. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:48
7 ತಿಳಿವುಗಳ ಹೋಲಿಕೆ  

ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್!


ಯೆಹೋವನನ್ನು ಎಂದೆಂದಿಗೂ ಕೊಂಡಾಡಿರಿ! ಆಮೆನ್, ಆಮೆನ್!


ತನ್ನ ಜನರು ತನ್ನ ಕಟ್ಟಳೆಗಳಿಗೆ ವಿಧೇಯರಾಗಲೆಂದೂ ತನ್ನ ಉಪದೇಶಗಳನ್ನು ಎಚ್ಚರಿಕೆಯಿಂದ ಪಾಲಿಸಲೆಂದೂ ಆತನು ಹೀಗೆ ಮಾಡಿದನು. ಯೆಹೋವನನ್ನು ಕೊಂಡಾಡಿರಿ.


ನೆರೆದುಬಂದಿದ್ದ ಎಲ್ಲಾ ಜನರ ಮುಂದೆ ದಾವೀದನು ದೇವರಾದ ಯೆಹೋವನನ್ನು ಸ್ತುತಿಸಿ ಹೀಗೆ ಪ್ರಾರ್ಥಿಸಿದನು: “ಇಸ್ರೇಲರ ದೇವರಾದ ಯೆಹೋವನೇ, ನಮ್ಮ ತಂದೆಯೇ, ನಿನಗೆ ನಿರಂತರವಾಗಿ ಕೊಂಡಾಟವಾಗಲಿ.


ನೀನು ನಿನ್ನ ಜೀವಾತ್ಮದಿಂದ ಸುತ್ತಿಸಬಹದು. ಆದರೆ ಅಲ್ಲಿರುವ ಒಬ್ಬನು ನಿನ್ನ ಕೃತಜ್ಞತಾಸ್ತುತಿಯನ್ನು ಅರ್ಥಮಾಡಿಕೊಳ್ಳದ ಹೊರತು “ಆಮೆನ್‌” ಎಂದು ಹೇಳಲಾರನು. ಏಕೆಂದರೆ ನೀನು ಹೇಳುತ್ತಿರುವುದು ಅವನಿಗೆ ತಿಳಿಯುವುದಿಲ್ಲ.


ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು