ಕೀರ್ತನೆಗಳು 106:8 - ಪರಿಶುದ್ದ ಬೈಬಲ್8 ಆದರೆ ಆತನು ತನ್ನ ಹೆಸರಿನ ನಿಮಿತ್ತವಾಗಿ ನಮ್ಮ ಪೂರ್ವಿಕರನ್ನು ರಕ್ಷಿಸಿದನು; ತನ್ನ ಮಹಾಶಕ್ತಿಯನ್ನು ತೋರಿಸುವುದಕ್ಕಾಗಿ ಅವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿ |
ಯೆಹೋವನು ಇಸ್ರೇಲರಿಗೆ ಮಾಡಿದ ಪ್ರತಿಯೊಂದು ಸಂಗತಿಯನ್ನು ಮೋಶೆ ಇತ್ರೋನನಿಗೆ ಹೇಳಿದನು. ಯೆಹೋವನು ಫರೋಹನಿಗೆ ಮತ್ತು ಈಜಿಪ್ಟಿನವರಿಗೆ ಮಾಡಿದ ಸಂಗತಿಗಳ ಬಗ್ಗೆ ಮೋಶೆಯು ಹೇಳಿದನು. ದಾರಿಯ ಉದ್ದಕ್ಕೂ ತಮಗೆ ಬಂದೊದಗಿದ ಎಲ್ಲಾ ಸಮಸ್ಯೆಗಳ ಬಗ್ಗೆ ಮತ್ತು ತೊಂದರೆ ಬಂದೊದಗಿದ ಪ್ರತಿ ಸಾರಿಯೂ ಯೆಹೋವನು ಇಸ್ರೇಲರನ್ನು ಹೇಗೆ ರಕ್ಷಿಸಿದನೆಂಬುದನ್ನು ಮೋಶೆಯು ತನ್ನ ಮಾವನಿಗೆ ತಿಳಿಸಿದನು.