ಕೀರ್ತನೆಗಳು 107:1 - ಪರಿಶುದ್ದ ಬೈಬಲ್1 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ! ಆತನು ಒಳ್ಳೆಯವನು! ಆತನ ಪ್ರೀತಿ ಶಾಶ್ವತವಾದದ್ದು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು. ಅಧ್ಯಾಯವನ್ನು ನೋಡಿ |
ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.
ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.