ಕೀರ್ತನೆಗಳು 107:17 - ಪರಿಶುದ್ದ ಬೈಬಲ್17 ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮೂರ್ಖರು ಅಪರಾಧದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ. ಅಧ್ಯಾಯವನ್ನು ನೋಡಿ |
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.