Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:22 - ಪರಿಶುದ್ದ ಬೈಬಲ್‌

22 ಯೆಹೋವನ ಕಾರ್ಯಗಳಿಗೆ ಕೃತಜ್ಞತಾ ಯಜ್ಞಗಳನ್ನು ಅರ್ಪಿಸಿರಿ. ಆತನ ಕಾರ್ಯಗಳ ಬಗ್ಗೆ ಹರ್ಷದಿಂದ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:22
14 ತಿಳಿವುಗಳ ಹೋಲಿಕೆ  

ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಾನು ಸಾಯುವುದಿಲ್ಲ; ನಾನು ಜೀವದಿಂದಿದ್ದು ಯೆಹೋವನ ಕಾರ್ಯಗಳ ಕುರಿತು ಹೇಳುತ್ತೇನೆ.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಆದ್ದರಿಂದ ಆತನ ಮೂಲಕ ನಾವು ದೇವರಿಗೆ ಯಜ್ಞಗಳನ್ನು ಅರ್ಪಿಸುವುದನ್ನು ನಿಲ್ಲಿಸಬಾರದು. ಆತನೇ ಪ್ರಭುವೆಂದು ನಮ್ಮ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು. ಆತನ ಹೆಸರಿನಲ್ಲಿ ಪ್ರಾರ್ಥಿಸುವೆನು.


ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.


ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.


ನೀವೂ ಸಹ ಜೀವವುಳ್ಳ ಕಲ್ಲುಗಳಾಗಿದ್ದೀರಿ. ಆತ್ಮಸಂಬಂಧವಾದ ದೇವಾಲಯವಾಗುವದಕ್ಕಾಗಿ ನೀವೇ ಕಟ್ಟಲ್ಪಡುತ್ತಿದ್ದೀರಿ; ದೇವರಿಂದ ಸ್ವೀಕೃತವಾಗುವಂಥ ಆತ್ಮಿಕ ಯಜ್ಞಗಳನ್ನು ಯೇಸು ಕ್ರಿಸ್ತನ ಮೂಲಕ ದೇವರಿಗೆ ಅರ್ಪಿಸುವ ಪವಿತ್ರ ಯಾಜಕರಾಗಿದ್ದೀರಿ.


ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.


ಯೆಹೋವನ ಮಹೋಪಕಾರಗಳಿಗೆ ಬದಲೇನು ಕೊಡಲಿ? ನನ್ನಲ್ಲಿರುವುದೆಲ್ಲ ಯೆಹೋವನದೇ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು