ಕೀರ್ತನೆಗಳು 107:34 - ಪರಿಶುದ್ದ ಬೈಬಲ್34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು. ಅಧ್ಯಾಯವನ್ನು ನೋಡಿ |
ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.