ಕೀರ್ತನೆಗಳು 107:38 - ಪರಿಶುದ್ದ ಬೈಬಲ್38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿ |
ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ವಿಯಾಗುವಂತೆ ದೇವರು ಮಾಡುವನು. ನಿಮಗೆ ಅನೇಕ ಮಕ್ಕಳನ್ನು ಅನುಗ್ರಹಿಸುವನು. ನಿಮ್ಮ ದನಗಳನ್ನು ಆಶೀರ್ವದಿಸುವನು. ಅವುಗಳಿಗೆ ಅನೇಕ ಕರುಗಳಿರುವವು. ನಿಮ್ಮ ಹೊಲಗಳು ಅಧಿಕವಾದ ಬೆಳೆಯನ್ನು ಕೊಡುವಂತೆ ಆಶೀರ್ವದಿಸುವನು. ಯೆಹೋವನು ನಿಮಗೆ ಶುಭವನ್ನು ಉಂಟುಮಾಡುವುದರಲ್ಲಿ ಸಂತೋಷಿಸುವನು. ನಿಮ್ಮ ಪೂರ್ವಿಕರಿಗೆ ಮೇಲನ್ನು ಉಂಟುಮಾಡಲು ಆತನು ಬಯಸಿದ್ದನು.
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು.