Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:4 - ಪರಿಶುದ್ದ ಬೈಬಲ್‌

4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:4
11 ತಿಳಿವುಗಳ ಹೋಲಿಕೆ  

“ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ಕುರುಬರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಬೆಟ್ಟಗುಡ್ಡಗಳ ಮೇಲೆ ನನ್ನ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.’”


“‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.


ಆ ಸ್ತ್ರೀಯು ತನಗಾಗಿ ದೇವರು ಸಿದ್ಧಪಡಿಸಿದ್ದ ಮರುಳುಗಾಡಿನ ಒಂದು ಸ್ಥಳಕ್ಕೆ ಓಡಿಹೋದಳು. ಆ ಮರಳುಗಾಡಿನಲ್ಲಿ ಆಕೆಯನ್ನು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪೋಷಿಸಲಾಗುವುದು.


ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.


ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು.


ದೇವರು ಭೂಲೋಕದ ನಾಯಕರುಗಳನ್ನು ಮೂಢರನ್ನಾಗಿ ಮಾಡುವನು; ರಸ್ತೆಯಿಲ್ಲದ ಮರಳುಗಾಡಿನಲ್ಲಿ ಅವರನ್ನು ಅಲೆದಾಡಿಸುವನು.


ಆತನು ನಿಮ್ಮನ್ನು ಭಯಂಕರವಾದ ಆ ಅಡವಿಯಲ್ಲಿ ಮೊದಲು ನಡೆಸಿದನು. ಅಲ್ಲಿ ವಿಷದ ಹಾವುಗಳು, ಚೇಳುಗಳು ಇದ್ದವು. ನೆಲವು ಕಾದಿದ್ದು ಎಲ್ಲಿಯೂ ನೀರು ಸಿಗುತ್ತಿರಲಿಲ್ಲ. ಆದರೆ ನಿಮ್ಮ ದೇವರಾದ ಯೆಹೋವನು ಬಂಡೆಯೊಳಗಿಂದ ನೀರನ್ನು ನಿಮಗೆ ಒದಗಿಸಿದನು.


“ಆದ್ದರಿಂದ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡು, ತನ್ನನ್ನು ಬೇಸರಗೊಳಿಸಿದ್ದ ಇಡೀ ತಲೆಮಾರು ಸಾಯುವತನಕ ಇಸ್ರೇಲರನ್ನು ಮರುಭೂಮಿಯಲ್ಲಿ ನಲವತ್ತು ವರ್ಷಗಳ ಕಾಲ ಅಲೆದಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು