ಕೀರ್ತನೆಗಳು 107:40 - ಪರಿಶುದ್ದ ಬೈಬಲ್40 ಆತನು ಅವರ ನಾಯಕರುಗಳಿಗೆ ಅವಮಾನ ಮಾಡಿದನು; ದಾರಿಗಳಿಲ್ಲದ ಅರಣ್ಯದಲ್ಲಿ ಅಲೆದಾಡುವಂತೆ ಅವರನ್ನು ತೊರೆದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಪ್ರಭುಗಳಿಗೆ ಅಪಮಾನವನ್ನುಂಟುಮಾಡಿ ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವಾತನು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು. ಅಧ್ಯಾಯವನ್ನು ನೋಡಿ |
ಫಿಲಿಷ್ಟಿಯರು, “ಇಸ್ರೇಲರ ದೇವರು ನಮ್ಮನ್ನು ಕ್ಷಮಿಸಬೇಕಾದರೆ ನಾವು ಯಾವ ಕಾಣಿಕೆಗಳನ್ನು ಕಳುಹಿಸಬೇಕು?” ಎಂದು ಕೇಳಿದರು. ಅರ್ಚಕರು ಮತ್ತು ಮಾಂತ್ರಿಕರು, “ನಿಮ್ಮಲ್ಲಿ ಐದು ಮಂದಿ ಅಧಿಪತಿಗಳಿದ್ದೀರಿ. ಪ್ರತಿಯೊಂದು ನಗರಕ್ಕೆ ಒಬ್ಬ ಅಧಿಪತಿಯಿದ್ದಾನೆ. ನೀವು ಮತ್ತು ನಿಮ್ಮ ಅಧಿಪತಿಗಳೆಲ್ಲರೂ ಒಂದೇ ರೀತಿಯಲ್ಲಿ ತೊಂದರೆಗೊಳಗಾಗಿದ್ದೀರಿ. ಆದ್ದರಿಂದ ಚಿನ್ನದಲ್ಲಿ ಐದು ಗಡ್ಡೆಗಳನ್ನು ಹಾಗೂ ಐದು ಇಲಿಗಳನ್ನು ಮಾಡಿಸಬೇಕು.
ಯಾಯೇಲಳು ಗುಡಾರದ ಗೂಟವನ್ನು ಮತ್ತು ಕೊಡತಿಯನ್ನು ತೆಗೆದುಕೊಂಡು ಶಬ್ದಮಾಡದೆ ಸೀಸೆರನ ಹತ್ತಿರ ಹೋದಳು. ಸೀಸೆರನು ಬಹಳ ದಣಿದಿದ್ದ ಕಾರಣ ಗಾಢನಿದ್ರೆ ಮಾಡುತ್ತಿದ್ದನು. ಯಾಯೇಲಳು ಗುಡಾರದ ಗೂಟವನ್ನು ಸೀಸೆರನ ತಲೆಯ ಒಂದು ಪಾರ್ಶ್ವದಲ್ಲಿ ಇಟ್ಟು ಕೊಡತಿಯಿಂದ ಬಲವಾಗಿ ಹೊಡೆದಳು. ಆ ಗುಡಾರದ ಗೂಟವು ಸೀಸೆರನ ತಲೆಯ ಮತ್ತೊಂದು ಪಾರ್ಶ್ವಕ್ಕೆ ತೂರಿಬಂದು ಭೂಮಿಯಲ್ಲಿ ಸೇರಿತು. ಸೀಸೆರನು ಸತ್ತನು.