Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:42 - ಪರಿಶುದ್ದ ಬೈಬಲ್‌

42 ಒಳ್ಳೆಯವರು ಇದನ್ನು ಕಂಡು ಸಂತೋಷಪಡುವರು. ದುಷ್ಟರು ಇದನ್ನು ಕಂಡು ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:42
11 ತಿಳಿವುಗಳ ಹೋಲಿಕೆ  

ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗಾರರನ್ನೆಲ್ಲಾ ಆತನು ಸೋಲಿಸಿದ್ದಾನೆ.


ದುಷ್ಟರ ನಾಶನವನ್ನು ಕಂಡು ನೀತಿವಂತರು ಸಂತೋಷಪಡುವರು. ನಿರಪರಾಧಿಗಳು ದುಷ್ಟರನ್ನು ಕಂಡು ನಗುತ್ತಾ,


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:


ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.


ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು