ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.