Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:8 - ಪರಿಶುದ್ದ ಬೈಬಲ್‌

8 ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡಿಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:8
16 ತಿಳಿವುಗಳ ಹೋಲಿಕೆ  

ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.


ಯೆಹೋವನನ್ನು ಸ್ತುತಿಸಿರಿ! ಆತನು ಒಳ್ಳೆಯವನು. ನಮ್ಮ ದೇವರನ್ನು ಸಂಕೀರ್ತಿಸಿರಿ. ಆತನನ್ನು ಸ್ತುತಿಸುವುದು ಒಳ್ಳೆಯದೂ ಸಂತೋಷಕರವೂ ಆಗಿದೆ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ.


ನಾವು ಅವುಗಳನ್ನು ಮರೆಯುವುದೇ ಇಲ್ಲ. ನಮ್ಮ ಜನರು ಕೊನೆಯ ತಲೆಮಾರಿನವರೆಗೂ ಅವುಗಳನ್ನು ಹೇಳುತ್ತಲೇ ಇರುವರು. ನಾವೆಲ್ಲರೂ ಯೆಹೋವನ ಪರಾಕ್ರಮವನ್ನೂ ಅದ್ಭುತಕಾರ್ಯಗಳನ್ನೂ ಹೇಳುತ್ತಾ ಕೊಂಡಾಡುವೆವು.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.


ನನ್ನೊಂದಿಗೆ ಯೆಹೋವನನ್ನು ಸ್ತುತಿಸಿರಿ. ನಾವು ಒಟ್ಟಾಗಿ ಆತನ ಹೆಸರನ್ನು ಸನ್ಮಾನಿಸೋಣ.


ಆದರೆ ಅವರು ಆಲೋಚಿಸುವ ರೀತಿಯನ್ನು ನಾನು ಬದಲಾಯಿಸಬೇಕಾಗಿದೆ. ಅವರು ನನಗೆ ವಿಧೇಯರಾಗಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ತಮ್ಮ ಹೃದಯಗಳಿಂದ ನನ್ನನ್ನು ಗೌರವಿಸಬೇಕು. ಆಗ ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿ ಶುಭವಿರುವುದು.


ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು