Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:1 - ಪರಿಶುದ್ದ ಬೈಬಲ್‌

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಹೃದಯಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ನುಡಿಸುತ್ತಾ ಹಾಡುವೆನು; ನನ್ನ ಆತ್ಮವೇ, ಎಚ್ಚೆತ್ತುಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ರಚಿಸುವೆನಿದೋ ಕವನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಬಾರಿಸುತ್ತಾ ಹಾಡುವೆನು; ನನ್ನ ಅಂತರಂಗವೂ ಸಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:1
13 ತಿಳಿವುಗಳ ಹೋಲಿಕೆ  

ನಾನು ಯೆಹೋವನನ್ನು ಕೊಂಡಾಡುತ್ತೇನೆ! ಎಲ್ಲಾ ಜೀವಿಗಳು ಆತನ ಪವಿತ್ರ ಹೆಸರನ್ನು ಸದಾಕಾಲ ಕೊಂಡಾಡಲಿ!


ನನ್ನ ಜೀವಮಾನವೆಲ್ಲಾ ನಾನು ಯೆಹೋವನಿಗೆ ಗಾನ ಮಾಡುವೆನು. ನಾನು ಬದುಕಿರುವವರೆಗೂ ಆತನನ್ನು ಸಂಕೀರ್ತಿಸುವೆನು.


ನಿನ್ನ ಒಳ್ಳೆಯತನವನ್ನೂ ರಕ್ಷಣೆಯನ್ನೂ ನಾನು ಹಗಲೆಲ್ಲಾ ಹೇಳುತ್ತಲೇ ಇರುವೆನು. ಅವು ವರ್ಣಿಸಲಸಾಧ್ಯವಾಗಿವೆ.


ದೇವರೇ, ಎದ್ದೇಳು! ನಿನ್ನ ವೈರಿಗಳನ್ನು ಚದರಿಸಿಬಿಡು. ಆತನ ಶತ್ರುಗಳೆಲ್ಲಾ ಆತನ ಬಳಿಯಿಂದ ಓಡಿಹೋಗಲಿ.


ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು. ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿರುವುದು.


ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಗಳನ್ನೂ ಸವಾರರನ್ನೂ ಸಮುದ್ರದೊಳಗೆ ಮುಳುಗಿಸಿದನು.


ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.


ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.


ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಹಾಡುಗಳನ್ನು ಎಲ್ಲಾ ದೇವರುಗಳ ಎದುರಿನಲ್ಲಿ ಹಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು