ಕೀರ್ತನೆಗಳು 108:6 - ಪರಿಶುದ್ದ ಬೈಬಲ್6 ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು. ನಿನ್ನ ಬಲಗೈಯಿಂದ ನಮ್ಮನ್ನು ಕಾಪಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು, ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು; ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ. ಅಧ್ಯಾಯವನ್ನು ನೋಡಿ |
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.