ಕೀರ್ತನೆಗಳು 109:22 - ಪರಿಶುದ್ದ ಬೈಬಲ್22 ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನ್ನ ಹೃದಯವು ನೊಂದು ದುಃಖಗೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಾನು ಬಡವನೂ ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ. ಅಧ್ಯಾಯವನ್ನು ನೋಡಿ |
ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.