Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:26 - ಪರಿಶುದ್ದ ಬೈಬಲ್‌

26 ನನ್ನ ದೇವರಾದ ಯೆಹೋವನೇ, ನನಗೆ ಸಹಾಯಮಾಡು! ನಿನ್ನ ಶಾಶ್ವತವಾದ ಪ್ರೀತಿಯಿಂದ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ I ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನೇ, ನನ್ನ ದೇವರೇ, ಸಹಾಯಮಾಡು; ನಿನ್ನ ಕೃಪೆಗೆ ತಕ್ಕಂತೆ ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನನ್ನ ದೇವರಾದ ಯೆಹೋವ ದೇವರೇ, ನನಗೆ ಸಹಾಯಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ಪ್ರಕಾರ ನನ್ನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:26
6 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ. ಅವರಾದರೋ ನನ್ನನ್ನು ನಿಷ್ಕಾರಣವಾಗಿ ಹಿಂಸಿಸುತ್ತಾರೆ; ನನಗೆ ಸಹಾಯಮಾಡು!


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಯೆಹೋವನೇ, ನಾನಾದರೋ, ನಿನಗೆ ಮೊರೆಯಿಟ್ಟಿದ್ದೇನೆ; ನಿನ್ನ ಕೃಪೆಗೆ ತಕ್ಕಕಾಲ ಇದೇ. ದೇವರೇ, ನಿನ್ನ ಮಹಾಪ್ರೀತಿಯಿಂದಲೂ ನಿಶ್ಚಿತವಾದ ರಕ್ಷಣೆಯಿಂದಲೂ ನನಗೆ ಉತ್ತರಿಸು.


ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ಯೆಹೋವನೇ, ನಿನ್ನ ಪ್ರೀತಿ ಎಷ್ಟೋ ಒಳ್ಳೆಯದು. ನಿನ್ನ ಪೂರ್ಣಪ್ರೀತಿಯಿಂದ ನನಗೆ ಉತ್ತರಿಸು. ನಿನ್ನ ಪೂರ್ಣ ಕರುಣೆಯಿಂದ ನನ್ನ ಕಡೆಗೆ ತಿರುಗಿ ಸಹಾಯಮಾಡು.


ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು