Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:29 - ಪರಿಶುದ್ದ ಬೈಬಲ್‌

29 ನನ್ನ ಶತ್ರುಗಳಿಗೆ ಅವಮಾನವೇ ವಸ್ತ್ರವಾಗಲಿ! ನಾಚಿಕೆಯೇ ಅವರ ಮೇಲಂಗಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:29
9 ತಿಳಿವುಗಳ ಹೋಲಿಕೆ  

ನಾನು ಅವನ ಶತ್ರುಗಳಿಗೆ ನಾಚಿಕೆಯೆಂಬ ವಸ್ತ್ರವನ್ನು ಹೊದಿಸುವೆನು. ಅವನ ರಾಜ್ಯವನ್ನಾದರೋ ಅಭಿವೃದ್ಧಿಗೊಳಿಸುವೆನು.”


ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.


ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.”


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡೆಯುವರು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ನನ್ನ ವೈರಿಗಳಿಗೆ ಜಯವಾಗಲು ಬಿಡಬೇಡ. ಅವರು ಕುಯುಕ್ತಿಗಳನ್ನು ಮಾಡುತ್ತಿದ್ದಾರೆ; ಅವುಗಳನ್ನು ವಿಫಲಗೊಳಿಸು.


ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು