Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:3 - ಪರಿಶುದ್ದ ಬೈಬಲ್‌

3 ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಹಗೆನುಡಿಗಳಿಂದ ನನ್ನನ್ನು ಮುತ್ತಿಕೊಂಡು ನಿಷ್ಕಾರಣವಾಗಿ ನನ್ನ ಸಂಗಡ ಯುದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:3
14 ತಿಳಿವುಗಳ ಹೋಲಿಕೆ  

ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ಬಾಧೆಗಳೂ ನೋವುಗಳೂ ಯಾವಾಗಲೂ ನನ್ನೊಂದಿಗಿವೆ. ಬಾಧೆಗಳಿಂದಲೂ ನೋವುಗಳಿಂದಲೂ ಮುಳುಗಿ ಹೋಗುತ್ತಿದ್ದೇನೆ.


ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.


ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; ಆಕ್ರಮಣಮಾಡಲು ಸಿದ್ಧರಾಗಿದ್ದಾರೆ.


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


ದಾವೀದನು, “ಒಡೆಯನೇ, ನನ್ನನ್ನೇಕೆ ಅಟ್ಟಿಸಿಕೊಂಡು ಬರುತ್ತಿರುವೆ? ನಾನು ಮಾಡಿರುವ ತಪ್ಪಾದರೂ ಏನು? ನಾನು ತಪ್ಪಿತಸ್ಥನೇ?


ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು