Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:4 - ಪರಿಶುದ್ದ ಬೈಬಲ್‌

4 ಯೆಹೋವನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆತನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಮನುಷ್ಯರ ಕಾರ್ಯಗಳನ್ನು ಗಮನಿಸುತ್ತಿದ್ದಾನೆ. ಆತನ ಕಣ್ಣುಗಳು ಅವರನ್ನು ಪರಿಶೋಧಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:4
28 ತಿಳಿವುಗಳ ಹೋಲಿಕೆ  

ಯೆಹೋವನ ಸಿಂಹಾಸನವು ಪರಲೋಕದಲ್ಲಿದೆ. ಆತನು ಸಮಸ್ತವನ್ನು ಆಳುವನು.


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.


ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಯೆಹೋವನು ಪರಲೋಕದಿಂದ ಮನುಷ್ಯರನ್ನು ದೃಷ್ಟಿಸಿ ನೋಡುವನು.


ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ದೇವರೆಂದು ಕರೆಸಿಕೊಳ್ಳುವ ಏನನ್ನೇ ಆಗಲಿ, ಜನರು ಪೂಜಿಸುವ ಯಾವುದನ್ನೇ ಆಗಲಿ ಅಧರ್ಮಸ್ವರೂಪನು ವಿರೋಧಿಸಿ, ಅವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡು ದೇವರ ಆಲಯದೊಳಕ್ಕೆ ಹೋಗಿ ಕುಳಿತುಕೊಂಡು ತಾನೇ ದೇವರೆಂದು ಹೇಳಿಕೊಳ್ಳುತ್ತಾನೆ.


ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು.


ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.


ಆತನು ಪ್ರಪಂಚವನ್ನು ತನ್ನ ಮಹಾಶಕ್ತಿಯಿಂದ ಆಳುತ್ತಾನೆ. ಆತನು ಎಲ್ಲರನ್ನೂ ಗಮನಿಸುತ್ತಾನೆ. ಆತನ ವಿರುದ್ಧ ದಂಗೆಯೇಳಲು ಯಾರಿಗೂ ಆಗದು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿದಂದಿನಿಂದ ಈ ದಿವಸದ ತನಕ ನಾನು ಮನೆಯಲ್ಲಿ ವಾಸವಾಗಿರಲಿಲ್ಲ. ನಾನು ಗುಡಾರದಲ್ಲಿಯೇ ಇದ್ದುಕೊಂಡು ಸಂಚರಿಸುತ್ತಿದ್ದೆನು. ಇಸ್ರೇಲರ ನಾಯಕರಾಗುವದಕ್ಕೆ ನಾನು ಕೆಲವರನ್ನು ಆರಿಸಿಕೊಂಡಿದ್ದೇನೆ. ಆ ನಾಯಕರು ನನ್ನ ಜನರಿಗೆ ಕುರುಬರಂತಿದ್ದಾರೆ. ಅವರೊಂದಿಗೆ ನಾನು ಬೇರೆಬೇರೆ ಸ್ಥಳಗಳಿಗೆ ಸಂಚರಿಸುತ್ತಿದ್ದಾಗ ನಾನೆಂದೂ ನನಗೊಂದು ಆಲಯವನ್ನು ದೇವದಾರು ಮರದಿಂದ ಕಟ್ಟಲು ಕೇಳಿಕೊಂಡಿರಲಿಲ್ಲ.’


‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರಬರುತ್ತಿದ್ದಾನೆ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ದೇವರಿಗೆ ಇವು ಖಂಡಿತವಾಗಿ ತಿಳಿದಿವೆ. ನಮ್ಮ ಅಂತರಾಳದ ರಹಸ್ಯಗಳನ್ನು ಸಹ ಆತನು ಬಲ್ಲನು.


ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕೀರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಎಲ್ಲಾ ಜನರೇ, ಕೇಳಿರಿ! ಭೂಮಿಯೂ ಅದರಲ್ಲಿರುವವರೆಲ್ಲರೂ ಕೇಳಿರಿ! ನನ್ನ ಒಡೆಯನಾದ ಯೆಹೋವನು ತನ್ನ ಪವಿತ್ರ ಆಲಯದಿಂದ ಬರುವನು. ನಿಮ್ಮ ವಿರುದ್ಧ ಸಾಕ್ಷಿಯಾಗಿ ಆತನು ಬರುವನು.


ತಾವು ಸುರಕ್ಷಿತವಾಗಿದ್ದೇವೆಂದು ದುಷ್ಟರು ಹೇಳುವುದು ಕೇವಲ ಅಲ್ಪಕಾಲದವರಗಷ್ಟೇ. ಯಾಕೆಂದರೆ ದೇವರು ಅವರನ್ನು ಗಮನಿಸುತ್ತಲೇ ಇರುವನು.


ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.


ನಮ್ಮ ದೇವರಾದ ಯೆಹೋವನಿಗೆ ಸಮಾನರು ಇಲ್ಲವೇ ಇಲ್ಲ. ಆತನು ಉನ್ನತ ಲೋಕದಲ್ಲಿ ಸಿಂಹಾಸನಾರೂಢನಾಗಿದ್ದಾನೆ.


ದೇವರೇ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ. ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗ್ರಹಿಸಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು