Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:5 - ಪರಿಶುದ್ದ ಬೈಬಲ್‌

5 ಯೆಹೋವನು ನೀತಿವಂತರಿಗಾಗಿ ಹುಡುಕುವನು. ಆದರೆ ಆತನು ದುಷ್ಟರನ್ನೂ ಹಿಂಸಕರನ್ನೂ ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ನೀತಿವಂತರನ್ನೂ ಅನೀತಿವಂತರನ್ನೂ ಪರೀಕ್ಷಿಸುತ್ತಾನೆ; ಬಲಾತ್ಕಾರಿಗಳನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:5
19 ತಿಳಿವುಗಳ ಹೋಲಿಕೆ  

ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.


ನನ್ನ ಸ್ನೇಹಿತರೇ, ನೀವು ಈಗ ಅನುಭವಿಸುತ್ತಿರುವ ಸಂಕಟಗಳ ವಿಷಯದಲ್ಲಿ ಆಶ್ಚರ್ಯಪಡದಿರಿ. ಅವು ನಿಮ್ಮ ನಂಬಿಕೆಯನ್ನು ಪರೀಕ್ಷಿಸುತ್ತಿವೆ. ವಿಪರೀತವಾದದ್ದು ನಿಮಗೆ ಸಂಭವಿಸುತ್ತಿದೆಯೆಂದು ಯೋಚಿಸದಿರಿ.


ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.


ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಅಂದನು.


ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.


ಒಂದೇ ತಿಂಗಳೊಳಗೆ ಮೂರು ಮಂದಿ ಕುರುಬರನ್ನು ನಾನು ಕೆಲಸದಿಂದ ಬಿಡಿಸಿದೆನು. ನಾನು ಕುರಿಗಳ ಮೇಲೆ ಸಿಟ್ಟುಗೊಳ್ಳಲಾರಂಭಿಸಿದೆನು. ಅವು ನನ್ನನ್ನು ಹಗೆ ಮಾಡಲಾರಂಭಿಸಿದವು.


ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ಸಂಪೂರ್ಣವಾಗಿ ತಿಳಿದುಕೊಂಡಿರುವೆ.


ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪುಟಕ್ಕೆ ಹಾಕಿ ಶೋಧಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.


ಕೆಡುಕರು ತಮ್ಮ ಇಷ್ಟವಾದ ವಸ್ತುಗಳ ಬಗ್ಗೆ ಕೊಚ್ಚಿಕೊಳ್ಳುವರು. ದುರಾಶೆಯುಳ್ಳ ಅವರು ದೇವರನ್ನು ಶಪಿಸುತ್ತಾ ಆತನ ಮೇಲೆ ತಮಗಿರುವ ದ್ವೇಷವನ್ನು ತೋರ್ಪಡಿಸಿಕೊಳ್ಳುವರು.


ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.


ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ಸರ್ವಶಕ್ತನಾದ ಯೆಹೋವನೇ, ನೀನು ಒಳ್ಳೆಯವರನ್ನು ಪರೀಕ್ಷಿಸುವೆ. ನೀನು ಒಬ್ಬ ವ್ಯಕ್ತಿಯ ಹೃದಯವನ್ನು ಮತ್ತು ಬುದ್ಧಿಯನ್ನು ಆಳವಾಗಿ ಪರೀಕ್ಷಿಸಿನೋಡುವೆ. ನಾನು ಅವರ ವಿರುದ್ಧ ನನ್ನ ಅಭಿಪ್ರಾಯಗಳನ್ನು ನಿನಗೆ ತಿಳಿಸಿದ್ದೇನೆ. ನೀನು ಅವರಿಗೆ ತಕ್ಕ ಶಿಕ್ಷೆಯನ್ನು ವಿಧಿಸಿರುವದನ್ನು ನನ್ನ ಕಣ್ಣುಗಳು ನೋಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು