Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:2 - ಪರಿಶುದ್ದ ಬೈಬಲ್‌

2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:2
20 ತಿಳಿವುಗಳ ಹೋಲಿಕೆ  

ಮೋವಾಬಿನ ಸುತ್ತಮುತ್ತಲೂ ವಾಸಿಸುವ ನೀವೆಲ್ಲರು ಆ ದೇಶಕ್ಕಾಗಿ ಗೋಳಾಡಬೇಕು. ಮೋವಾಬ್ ಎಷ್ಟು ಸುಪ್ರಸಿದ್ಧವಾಗಿದೆ ಎಂಬುದು ನಿಮಗೆಲ್ಲ ಗೊತ್ತು. ಆದ್ದರಿಂದ ಅದಕ್ಕಾಗಿ ಗೋಳಾಡಿರಿ. ‘ರಾಜನ ಶಕ್ತಿಯು ಇಲ್ಲವಾಯಿತು. ಮೋವಾಬಿನ ಸಾಮರ್ಥ್ಯ ಮತ್ತು ಘನತೆ ಕಣ್ಮರೆಯಾದವು’ ಎಂದು ಹೇಳಿರಿ.


ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೆಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.


ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.


ನೀವು ದೇವರ ಸಂದೇಶವನ್ನು ಸ್ವೀಕರಿಸಿಕೊಂಡದ್ದಕ್ಕಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀವು ಆ ಸಂದೇಶವನ್ನು ನಮ್ಮಿಂದ ಕೇಳಿ, ಅದನ್ನು ದೇವರ ವಾಕ್ಯದಂತೆ ಒಪ್ಪಿಕೊಂಡಿರೇ ಹೊರತು ಮಾನವನ ವಾಕ್ಯಗಳೆಂದಲ್ಲ. ಅದು ನಿಜವಾಗಿಯೂ ದೇವರ ಸಂದೇಶ. ಆ ಸಂದೇಶವು ನಂಬುವವರಾದ ನಿಮ್ಮಲ್ಲಿ ಕಾರ್ಯಮಾಡುತ್ತದೆ.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


ಅವನು ಆಲಯದ ಪ್ರವೇಶ ದ್ವಾರಕ್ಕೆ ನನ್ನನ್ನು ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದ್ವಾರದ ಕೆಳಗಡೆಯಿಂದ ಹರಿಯುವ ನೀರನ್ನು ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.


ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”


ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.


ಅವನ ರಾಜ್ಯವು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೇಟೀಸ್ ನದಿಯಿಂದ ಭೂಮಿಯ ಬಹುದೂರದ ಸ್ಥಳದವರೆಗೂ ಬೆಳೆಯಲಿ.


ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು.


ಆದ್ದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.


ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಊರುಗೋಲನ್ನು ನದಿಗಳ, ಕಾಲುವೆಗಳ, ಕೆರೆಗಳ ಮತ್ತು ನೀರಿರುವ ಪ್ರತಿಯೊಂದು ಸ್ಥಳದ ಮೇಲೆ ಚಾಚು’ ಎಂದು ಹೇಳು. ಅವನು ಚಾಚಿದಾಗ ನೀರೆಲ್ಲಾ ರಕ್ತವಾಗುವುದು. ಮರದ ಮತ್ತು ಕಲ್ಲಿನ ಪಾತ್ರೆಗಳಲ್ಲಿರುವ ನೀರು ಸಹ ರಕ್ತವಾಗುವುದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು