Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:3 - ಪರಿಶುದ್ದ ಬೈಬಲ್‌

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:3
28 ತಿಳಿವುಗಳ ಹೋಲಿಕೆ  

“ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.


ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.


ನಿಮ್ಮ ಮೇಲೆ ನನಗಿರುವ ಪ್ರೀತಿಯನ್ನು ದೇವರು ತೀತನಿಗೂ ಕೊಟ್ಟದ್ದಕ್ಕಾಗಿ ದೇವರನ್ನು ಸ್ತುತಿಸುತ್ತೇನೆ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಈ ಸಂಗತಿಗಳನ್ನು ಕೇಳಿದ ಹಿರಿಯರು ದೇವರನ್ನು ಕೊಂಡಾಡಿದರು. ಬಳಿಕ ಅವರು ಪೌಲನಿಗೆ, “ಸಹೋದರನೇ, ವಿಶ್ವಾಸಿಗಳಿಗಾಗಿ ಪರಿವರ್ತನೆಗೊಂಡಿರುವ ಸಾವಿರಾರು ಮಂದಿ ಯೆಹೂದ್ಯರನ್ನು ನೀನು ಇಲ್ಲಿ ಕಾಣಬಹುದು. ಆದರೆ ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗುವುದು ಬಹಳ ಮುಖ್ಯವೆಂಬುದು ಇವರ ಆಲೋಚನೆ.


ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.


ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ.


ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.


ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.


ಹೀಗೆ ಪ್ರಭುವಿನ ವಾಕ್ಯವು ಶಕ್ತಿಯುತವಾದ ರೀತಿಯಲ್ಲಿ ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದಾಗಿ ಹೆಚ್ಚುಹೆಚ್ಚು ಜನರು ನಂಬಿಕೊಂಡರು.


ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.


ಕೆಲವರು ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ತಾವೇ ಮುಂದೆ ಬಂದರು. ಉಳಿದವರು ತಾವಾಗಿಯೇ ಮುಂದೆ ಬಂದವರನ್ನು ವಂದಿಸಿ ಆಶೀರ್ವದಿಸಿದರು.


ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.


“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ.


ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.


ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು