ಕೀರ್ತನೆಗಳು 110:6 - ಪರಿಶುದ್ದ ಬೈಬಲ್6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು. ಅಧ್ಯಾಯವನ್ನು ನೋಡಿ |
ಆಗ ಪ್ರಪಂಚದ ಎಲ್ಲಾ ಜನಾಂಗಗಳಿಗೆ ಯೆಹೋವನೇ ನ್ಯಾಯಾಧೀಶನು. ದೂರದೇಶದಲ್ಲಿರುವ ಅನೇಕ ಜನರ ಜಗಳಗಳನ್ನು ಆತನು ನಿಲ್ಲಿಸುವನು. ಆ ಜನರು ಯುದ್ಧದ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು. ತಮ್ಮ ಖಡ್ಗಗಳಿಂದ ನೇಗಿಲ ಗುಳಗಳನ್ನು ತಯಾರಿಸುವರು. ಭರ್ಜಿಗಳಿಂದ ಕುಡುಗೋಲುಗಳನ್ನು ತಯಾರಿಸುವರು. ಜನರೊಳಗೆ ಪರಸ್ಪರ ಯುದ್ಧ ಮಾಡುವದನ್ನು ನಿಲ್ಲಿಸುವರು. ಯುದ್ಧಕ್ಕೆ ತರಬೇತಿ ಎಂದಿಗೂ ಮಾಡರು.
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.