ಕೀರ್ತನೆಗಳು 110:7 - ಪರಿಶುದ್ದ ಬೈಬಲ್7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 [ಒಡೆಯನು] ದಾರಿಯಲ್ಲಿ ಹಳ್ಳದ ನೀರು ಕುಡಿದು ತಲೆಯೆತ್ತುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು. ಅಧ್ಯಾಯವನ್ನು ನೋಡಿ |
ಕ್ರಿಸ್ತನ ಆತ್ಮನು ಅವರಲ್ಲಿದ್ದನು. ಆ ಆತ್ಮನು ಕ್ರಿಸ್ತನಿಗೆ ಸಂಭವಿಸಬಹುದಾದ ಸಂಕಟವನ್ನು ಮತ್ತು ಆ ಸಂಕಟಗಳ ನಂತರ ಬರಲಿದ್ದ ಮಹಿಮೆಯನ್ನು ಕುರಿತು ತಿಳಿಸುತ್ತಿದ್ದನು. ಆ ಪ್ರವಾದಿಗಳು ತಮಗೆ ಆತ್ಮನು ತೋರಿಸುತ್ತಿದ್ದುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು. ಆ ಸಂಗತಿಗಳು ಯಾವಾಗ ಸಂಭವಿಸುತ್ತವೆ ಹಾಗೂ ಆ ಕಾಲದಲ್ಲಿ ಈ ಲೋಕವು ಹೇಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿದರು.
ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”