ಕೀರ್ತನೆಗಳು 111:10 - ಪರಿಶುದ್ದ ಬೈಬಲ್10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.