ಕೀರ್ತನೆಗಳು 112:9 - ಪರಿಶುದ್ದ ಬೈಬಲ್9 ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು. ಅಧ್ಯಾಯವನ್ನು ನೋಡಿ |
ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”